ಶುಭೋದಯ
ಜಗತ್ತಿನಲ್ಲಿ ಹೇಳುವವರಿಗಿಂತ ,
ಹೇಳಿದಂತೆ ನಡೆಯುವವರ ಯೋಗ್ಯತೆ ಹೆಚ್ಚಿನದು
– ಗಳಗನಾಥ.
**********************
1.ಪರಮಾಣು ಶಸ್ತ್ರಾಸ್ತ್ರ ಬಳಸದಂತೆ ಪುಟಿನ್ ಮನವೊಲಿಸಿದ ಪ್ರಧಾನಿ ಮೋದಿ; ಪೋಲೆಂಡ್ ಸಚಿವ
ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸದಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮನವೊಲಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜತಾಂತ್ರಿಕ ಹಸ್ತಕ್ಷೇಪವನ್ನು ಪೋಲೆಂಡ್ನ ಉಪ ವಿದೇಶಾಂಗ ಸಚಿವ ಮತ್ತು ವಿದೇಶಾಂಗ ಕಾರ್ಯದರ್ಶಿ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ ಒಪ್ಪಿಕೊಂಡಿದ್ದಾರೆ. ಪೋಲೆಂಡ್ನ ಉಪ ವಿದೇಶಾಂಗ ಸಚಿವ ಮತ್ತು ವಿದೇಶಾಂಗ ಕಾರ್ಯದರ್ಶಿ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ವಿರುದ್ಧ ಪರಮಾಣು ಯುದ್ಧತಂತ್ರದ ಶಸ್ತ್ರಾಸ್ತ್ರಗಳನ್ನು ಬಳಸದಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮನವೊಲಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಯುರೋಪ್ ಈ ಪ್ರದೇಶದಲ್ಲಿ ಶಾಶ್ವತ ಮತ್ತು ಸುಸ್ಥಿರ ಶಾಂತಿಯನ್ನು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

***********************************************
2.ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ನ್ಯೂಜಿಲೆಂಡ್ ಪ್ರಧಾನಿ ಲಕ್ಸನ್
ಭಾರತದ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ನಿನ್ನೆ ಪ್ರಧಾನಿ ಮೋದಿಯವರೊಂದಿಗೆ ದೆಹಲಿಯ ಗುರುದ್ವಾರದಲ್ಲಿ ಪೂಜೆ ಸಲ್ಲಿಸಿದ್ದರು. ಇಂದು ದೆಹಲಿಯ BAPS ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ರೈಸಿನಾ ಸಂವಾದ 2025ರಲ್ಲಿ ಅವರ ಭಾರತದ ಜೊತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬದ್ಧತೆಯನ್ನು ಶ್ಲಾಘಿಸಿದರು.
**********************************
3.ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ
ಬಿಜೆಪಿ ನಾಯಕ ಆ ಅಶೋಕ್ ವಿರುದ್ಧದ ಬಗರ್ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶೋಕ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಇದೀಗ ಸುಪ್ರೀಂ, ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿದೆ.

**************************************
4.ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್ ಯು ಟಿ ಖಾದರ್ ಗರಂ
ಬೆಂಗಳೂರು: ಸದನದಲ್ಲಿ ಸಚಿವರ ಗೈರುಹಾಜರಿಯಿಂದ ಗರಂ ಆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಂಗಳವಾರ ಬೇಸರ ವ್ಯಕ್ತಪಡಿಸಿದರು.

********************************
5.ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ಆಡಳಿತದ ರಾಜ್ಯಗಳು, ವಿಶ್ವಸಂಸ್ಥೆ ಮೆಚ್ಚುಗೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತಿಳಿಸಿದರು.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಸಿದ್ದರಾಮಯ್ಯ, 2025ರ ಜನವರಿ 3 ರಂದು ಚಂದ್ರಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿರುವುದಾಗಿ ತಿಳಿಸಿದರು.

*********************************************
ಜಾಹೀರಾತು

