
ಶುಭೋದಯ
ಬೇರೆಯವರಿಗೆ ಒಳ್ಳೆಯದನ್ನು ಮಾಡಿದರೆ ಅದು ಕರ್ತವ್ಯ ಅಲ್ಲ,
ಅದು ನಿಮ್ಮ ಆತ್ಮ ಸಂತೋಷಕ್ಕಾಗಿ ಮಾಡಿಕೊಳ್ಳುವುದು.
ಆತ್ಮ ಸಂತೋಷಕ್ಕಾಗಿ ಮಾಡುವ ಯಾವುದೇ ಕಾರ್ಯವಿರಲಿ,
ಅದು ನಿಮಗೆ ಅತೀವ ಸಂತಸ ಮತ್ತು ಸಮಾಧಾನವನ್ನು ಕೊಡುತ್ತದೆ
***********************
1.ನವೋದ್ಯಮಗಳಿಗೆ 75 ಕೋಟಿ ವೆಚ್ಚದಲ್ಲಿ ಕ್ಲಸ್ಟರ್ ಸೀಡ್ ಫಂಡ್, ಅಥಣಿ, ಮುಧೋಳದಲ್ಲಿ 50 ಹಾಸಿಗೆಯ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 37.98 ಕೋಟಿ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶಹಾಪೂರ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ನಿರ್ಮಾಣ ಮಾಡಲು ನಿಗಮದ 198.35 ಚ.ಮೀ ಜಾಗವನ್ನು ಉಚಿತವಾಗಿ ಒದಗಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
**********************
2. ದೇವನಹಳ್ಳಿ: ತಹಶೀಲ್ದಾರ್ ಸಹಿ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್ಐ!
ಆತ ಸರ್ಕಾರಿ ಅಧಿಕಾರಿ, ಸರ್ಕಾರದ ಕೆಲಸ ಮಾಡಿಕೊಂಡು ಸಂಬಳ ತೆಗೆದುಕೊಳ್ಳುವ ಬದಲು ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ತಹಶೀಲ್ದಾರ್ ಸಹಿ ಹಾಗೂ ಸೀಲ್ ದುರ್ಬಳಕೆ ಮಾಡಿಕೊಂಡು ನುಂಗಿ ನೀರು ಕುಡಿದು ಅರೆಸ್ಟ್ ಆಗಿದ್ದ. ಆದರೆ, ಇದೀಗ ವಂಚಕ ಆರ್ಐಯನ್ನು ಅಮಾನತು ಮಾಡಿ ಆದೇಶಿಸಲಾಗಿದ್ದು, ಆತ ಲಪಾಟಾಯಿಸಿದ್ದ ಲಕ್ಷಾಂತರ ರೂ. ಹಣವನ್ನು ಪುನಃ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
********************
3.ಕರಿದ ಹಸಿರು ಬಟಾಣಿಗೆ ಕೃತಕ ಬಣ್ಣ ಬಳಸಿ ಮಾರಾಟ: ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ
ಕರ್ನಾಟಕ ಸರ್ಕಾರವು ಕರಿದ ಹಸಿರು ಬಟಾಣಿಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ತಡೆಯಲು ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತಾ ಇಲಾಖೆಯು ರಾಜ್ಯಾದ್ಯಂತ ಬಟಾಣಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದೆ. 70ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಪ್ರಯೋಗಾಲಯದ ವರದಿಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.
*******************
4. ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಫೆಬ್ರವರಿಯಲ್ಲಿ ಹೆಚ್ಚು ತಾಪಮಾನ
ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಆದರೆ ಮುಂಗಾರು ಪೂರ್ವದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
****************
5. ಸರ್ಕಾರಿ ಶಾಲೆಗಳ ರೀತಿಯಲ್ಲೇ ಸಾರ್ವಜನಿಕ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ: ಮಧು ಬಂಗಾರಪ್ಪ
ಗ್ರಂಥಾಲಯ ಇಲಾಖೆಗೆ ಹೊಸ ಸ್ಪರ್ಶ ನೀಡಲು ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ ಮೊದಲ ಬಾರಿಗೆ ಐಎಎಸ್ ದರ್ಜೆಯ ಅಧಿಕಾರಿಯನ್ನು ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.