
ಶುಭೋದಯ
ನೀವು ಹೊರಟ ಸಾಧನೆಯ ಪಥದಲ್ಲಿ ಅನೇಕ ಅಡ್ಡಿ-ಆತಂಕಗಳಿವೆ
ಅಂದ್ರೆ ಗುರಿ ಸಾಧನೆ ಅಸಾಧ್ಯ ಎಂದಲ್ಲ.
ಅಡ್ಡಿ-ಆತಂಕಗಳನ್ನು ನಿವಾರಿಸಿಕೊಂಡರೆ ಗುರಿ ತಲುಪಬಹುದು.
ಕಷ್ಟಗಳ ಬಗ್ಗೆ ಯೋಚಿಸಿದರೆ ಅದೊಂದೇ ಕಾಣುತ್ತದೆ.
ಪರಿಹಾರದ ಬಗ್ಗೆ ಯೋಚಿಸಿದರೆ ದಾರಿ ತೆರೆದುಕೊಳ್ಳುತ್ತಾ ಹೋಗುತ್ತದೆ
***********
1. ಭಾಷೆಯ ಆಧಾರದ ಮೇಲೆ ಸಮಾಜ ವಿಭಜಿಸುವ ಪ್ರಯತ್ನಗಳಿಂದ ದೂರವಿರಿ; ಪ್ರಧಾನಿ ಮೋದಿ
ನವದೆಹಲಿಯಲ್ಲಿ ನಡೆದ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮರಾಠಿ ಭಾಷೆಯ ಭಕ್ತಿ, ಶಕ್ತಿ ಮತ್ತು ಬುದ್ಧಿವಂತಿಕೆಯನ್ನು ಶ್ಲಾಘಿಸಿದರು. ಮರಾಠಿ ಭಾಷೆಯ ಸಾಂಸ್ಕೃತಿಕ ಕೊಡುಗೆಯನ್ನು ಬಣ್ಣಿಸಿದರು. ಈ ವೇಳೆ ಶರದ್ ಪವಾರ್ ಮತ್ತು ಸಿಎಂ ದೇವೇಂದ್ರ ಫಡ್ನವೀಸ್ ಸಹ ಸಾಹಿತ್ಯ ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.
*********************************
2. ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ: ಅಂಕಿಅಂಶ ಸಮೇತ ಸಿಎಂ ತಿರುಗೇಟು
ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ ಮತ್ತು ರಾಜ್ಯ ದಿವಾಳಿಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದ್ದಾರೆ.
*************************
3. ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ
ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ. ರಾತ್ರಿಯೆಲ್ಲಾ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕ ದಳ ಕಾರ್ಯ ಪ್ರವೃತ್ತರಾಗಿದ್ದರು.
*****************************
4. ಗುಡ್ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಗೃಹಲಕ್ಷ್ಮಿಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದರು. ಕಳೆದ ಮೂರು ತಿಂಗಳಿನಿಂದ ಹಣ ಹಾಕಿಲ್ಲ ಎನ್ನುವ ಆರೋಪಗ ಕೇಳಿಬಂದಿದ್ದು, ಈ ಕುರಿತು ಟಿವಿ9 ಕೂಡ ನಿರಂತರ ವರದಿ ಮಾಡಿತ್ತು. ಗೃಹಲಕ್ಷ್ಮಿಯರ ಅಳಲು ಸರ್ಕಾರದ ಗಮನ ತರುವ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಾಕುವ ಭರವಸೆ ನೀಡಿದ್ದಾರೆ.
*******************************
5. ಬಂಡೀಪುರದಲ್ಲಿ ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮುಂದಾದ ಅರಣ್ಯ ಇಲಾಖೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಸಿರು ಸುಂಕ ವಸೂಲಿಗೆ ಫಾಸ್ಟ್ಟ್ಯಾಗ್ ವ್ಯವಸ್ಥೆ ಜಾರಿಗೆ ಬಂದಿದೆ. ವಾರಾಂತ್ಯದಲ್ಲಿ ಉಂಟಾಗುತ್ತಿದ್ದ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೂರು ಫಾಸ್ಟ್ಟ್ಯಾಗ್ ಕೇಂದ್ರಗಳು ಸ್ಥಾಪಿಸಲಾಗಿದೆ. ಲಘು ವಾಹನಗಳಿಗೆ 20 ರೂ ಮತ್ತು ಭಾರಿ ವಾಹನಗಳಿಗೆ 50 ರೂ. ಸುಂಕ ವಿಧಿಸಲಾಗುತ್ತಿದೆ.
*****************************