
ಹಾಸನ: ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಾಪುರ ಗ್ರಾಮದ ಸಂಜು (25) ಮೃತ ಯುವಕ.
ಕ್ರಷರ್ನಿಂದ ಸಿಲ್ವರ್ ಸ್ಯಾಂಡ್ ತುಂಬಿಕೊಂಡು ಬರುತ್ತಿದ್ದಾಗ ರಸ್ತೆ ಸರಿ ಇಲ್ಲದ ಕಾರಣ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ನಡಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ.
ಕ್ರಷರ್ ಮಾಲೀಕನೇ ಅವಘಡಕ್ಕೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಕ್ರಷರ್ ಮಾಲೀಕ ಸರಿಯಾಗಿ ರಸ್ತೆ ನಿರ್ಮಿಸಿಲ್ಲ. ರಸ್ತೆ ಸರಿ ಇಲ್ಲದ ಕಾರಣದಿಂದಲೇ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಬೇಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.