ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ ಆದ ಟೆನ್ಷನ್ನಲ್ಲಿರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.
ರನ್ಯಾಳಿಂದ ವಿಚ್ಛೇದನ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಆ ಮೂಲಕ ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಜತಿನ್ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.

2024 ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್ನಲ್ಲಿ ರನ್ಯಾ, ಜತಿನ್ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು. 2024 ಅಕ್ಟೋಬರ್ 23ರಂದು ರನ್ಯಾ, ಜತಿನ್ ಎಂಗೇಜ್ ಮೆಂಟ್ ಆಗಿತ್ತು. 2024 ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮದುವೆ ಕೂಡ ಆಗಿತ್ತು. ಬಳಿಕ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.
