ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ H. D. Revanna ಮತ್ತು ವಿಧಾನ ಪರಿಷತ್ ಸದಸ್ಯರಾದ Dr. Suraj Revanna ಭಾಗವಹಿಸಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಎಚ್.ಡಿ. ರೇವಣ್ಣ, ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ ಲೋಕಾರ್ಪಣೆಗೊಳಿಸಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. “ನಮ್ಮ ಕುಟುಂಬಕ್ಕೆ ರಾಜಕೀಯ ಶಕ್ತಿ ತುಂಬಿದ ಗ್ರಾಮವೇ ಅಗ್ರಹಾರ. ಈ ಗ್ರಾಮದ ಅಭಿವೃದ್ಧಿಗಾಗಿ ನಮ್ಮ ಕುಟುಂಬ ಸದಾ ಸಿದ್ಧವಾಗಿದೆ,” ಎಂದು ತಿಳಿಸಿದರು.
ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಮುಂದೆಯೂ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಮಾತನಾಡಿ, ಗ್ರಾಮದ ಎಲ್ಲಾ ಮುಖಂಡರು ಮತ್ತು ಗ್ರಾಮಸ್ಥರು ಒಗ್ಗಟ್ಟಿನಿಂದ ದೇವಸ್ಥಾನ ನಿರ್ಮಿಸಿರುವುದು ಸಂತಸದ ವಿಷಯ ಎಂದರು. “ಅಗ್ರಹಾರ ಗ್ರಾಮವು ನಮ್ಮ ತಾತ, ತಂದೆ, ಸಹೋದರರು ಹಾಗೂ ನನಗೂ ರಾಜಕೀಯ ಪುನರ್ಜೀವನ ನೀಡಿದ ಗ್ರಾಮ. ಈ ಋಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,” ಎಂದು ಹೇಳಿದರು.
ಅಗ್ರಹಾರ ಗ್ರಾಮದ ವಿವಿಧ ದೇವಾಲಯಗಳ ಅಭಿವೃದ್ಧಿಗೆ ಸಹಾಯ ಮಾಡಲಾಗಿದ್ದು, ಮುಂದಿನ ದಿನಗಳಲ್ಲೂ ವಿಶೇಷ ಅನುದಾನ ನೀಡುವ ಮೂಲಕ ಗ್ರಾಮದ ಸೇವೆ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಅಗ್ರಹಾರ ಗ್ರಾಮದ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.
– ಮಂಜುನಾಥ್ ಐ . ಕೆ.