ತುಮಕೂರು:ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ಳಾವಿ ವಲಯದ ಬಳ್ಳಾಪುರ ಗ್ರಾಮದಲ್ಲಿ ಕೃಷಿ ಯಾಂತ್ರಿಕರಣ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಗಂಗಮ್ಮ ರವರು ಉದ್ಘಾಟಿಸಿ ಮಾತನಾಡುತ್ತಾ ಪೂಜ್ಯ ವೀರೇಂದ್ರಹೆಗ್ಗಡೆರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮೂಲಕ ರೈತರ ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಾಕಷ್ಟು ಕಾರ್ಯಕ್ರಮ ನಡೆಸುತ್ತಿದ್ದಾರೆ ಇದು ನಮ್ಮೆಲ್ಲರ ಸೌಭಾಗ್ಯ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ಕೃಷಿ ಅಧಿಕಾರಿ ಶ್ರೀಮತಿ ಶಾಲಿನಿ ರವರು ಪ್ರಸ್ತುತ ರೈತರು ಆಧುನಿಕ ಕೃಷಿ ಪದ್ಧತಿಯಲ್ಲಿ ಯಂತ್ರೋಪಕರಣ ಬಳಕೆ ಅನಿವಾರ್ಯ ಸಣ್ಣ ರೈತರಿಗೆ ಅನುಕೂಲವಾಗಲು ಸಾಕಷ್ಟು ಯಂತ್ರಗಳಿವೆ ಇದನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಕೃಷಿ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಅನುದಾನವಿದ್ದು ಇದನ್ನು ರೈತರು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯದರ್ಶಿ ಜಯರಾಮಯ್ಯ. ರೈತ ಮುಖಂಡ ರಂಗಯ್ಯ ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್. ಸೇವಾಪ್ರತಿನಿಧಿ ಶ್ರೀಮತಿ ಶಾಲಿನಿ, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ರೈತರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
