ಆಲೂರು : ಹಾಸನ ಜಿಲ್ಲೆ ಆಲೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಲ ಕೊಪ್ಪಲು ಸಹ ಶಿಕ್ಷಕ ಸಿ. ಎಸ್. ಅಣ್ಣಪ್ಪ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಹಾಸನ ಜಿಲ್ಲಾ ಘಟಕದ ಲೆಕ್ಕಪರಿಶೋಧಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹಾಸನ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಎಂ. ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರಿಗೆ ಆಲೂರು ತಾಲೂಕು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ವರದರಾಜು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ಆಲೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಆರ್. ಶ್ರೀನಿವಾಸ್ ಮುಂತಾದವರು ಶುಭ ಕೋರಿದ್ದಾರೆ.
