ಆಲೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡಕ್ಕೆ ಶೀಘ್ರ ಸ್ಥಳಾಂತರ – ಶಾಸಕ ಸಿಮೆಂಟ್ ಮಂಜು ಭರವಸೆ

ಆಲೂರು ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಶೀಘ್ರದಲ್ಲೇ ಪಾಳ್ಯ ಬಳಿಯ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಶಾಸಕರು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. 24 ಕೋಟಿ ವೆಚ್ಚದ ನೂತನ ಕಟ್ಟಡದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಒದಗಿಸಲಾಗುತ್ತದೆ. ಗ್ಯಾಸ್ ಸಿಲಿಂಡರ್‌ಗಳ ಸುರಕ್ಷತಾ ಅಂಶದ ಬಗ್ಗೆ ಕೂಡ ಶಾಸಕರು ಸೂಚನೆ ನೀಡಿದರು.