ಆಲೂರು- ಪೊಲೀಸ್ ಠಾಣೆಯ ಮಿಂಚಿನ ಕಾರ್ಯಾಚರಣೆಯಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ ₹15,560 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಅವರ ನೇತೃತ್ವದ ತಂಡ ಚಿನ್ನಳ್ಳಿ ಗ್ರಾಮದ ಬಳಿ ಇರುವ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಪಕ್ಕಾ ಮಾಹಿತಿ ಪಡೆದ ಮೇಲೆ ಕಾರ್ಯಾಚರಣೆ ಕೈಗೊಂಡಿತು. ಅಬ್ಬನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಪ್ರದೇಶದಲ್ಲಿ 8 ರಿಂದ 10 ಮಂದಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ: ಫಾರ್ಮುಲಾ 4 ಇಂಡಿಯನ್ ಚಾಂಪಿಯನ್ಶಿಪ್ ಫಿನಾಲೆಯಲ್ಲಿ ಬೆಂಗಳೂರಿನ ಇಶಾನ್ ಮಾದೇಶ್!
ಪೊಲೀಸರು ದಾಳಿ ನಡೆಸಿ ಹಣದ ಜೊತೆಗೆ ಕೆಲವು ಜೂಜಾಟ ಸಾಮಗ್ರಿಗಳನ್ನು ವಶಕ್ಕೆ ಪಡೆದು, ಅಕ್ರಮ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಜೊತೆಗೆ ರವಿ, ಮೋಹನ್ ಕುಮಾರ್, ಪೂರ್ಣೇದ್ರ, ಪುನೀತ್ ಹಾಗೂ ಸಂಗಮ್ ಭಾಗವಹಿಸಿದರು.
