ಆಲೂರು : ಸಮಾಜಸೇವಕ, ಯುವ ಮುಖಂಡ ಗಣೇಶ್ ಸ್ನೇಹಜೀವಿಯವರಿಗೆ ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ “ಸಮಾಜ ಸೇವಾ ಭೂಷಣ ಪ್ರಶಸ್ತಿ” ಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್ ಉಪ್ಪಾರ್, ತಾಲ್ಲೂಕು ಗೌರವಾಧ್ಯಕ್ಷ ಎಂ. ಬಾಲಕೃಷ್ಣ, ತಾಲೂಕು ಅಧ್ಯಕ್ಷ ಮಣಿಪುರ ಕೃಷ್ಣೇಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಿ.ಎಂ. ವರದರಾಜು, ವೇದಿಕೆಯ ತಾಲೂಕು ಉಪಾಧ್ಯಕ್ಷ ಟಿ.ಕೆ. ನಾಗರಾಜು, ತಾಲೂಕು ಕಾರ್ಯದರ್ಶಿ ಧರ್ಮ ಕೆರಲೂರು, ತಾಲೂಕು ಕೋಶಾಧ್ಯಕ್ಷ ಡಿ.ಸಿ. ಬಸವರಾಜ್, ಸಂಘಟನಾ ಕಾರ್ಯದರ್ಶಿ ಎಚ್.ಡಿ. ಪ್ರದೀಪ್ ಸೇರಿದಂತೆ ಇತರರು ಹಾಜರಿದ್ದರು.
