ಬೆಂಗಳೂರು, ಜೂನ್ 18: ನಗರದ ಹತ್ತು ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಲಿಮಿಟೆಡ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಕರ್ನಾಟಕದ್ದೇ ಆದ ಕೆಎಂಎಫ್ ನಂದಿನಿ (KMF Nandini) ಇರುವಾಗ ಅಮುಲ್ಗೆ ಏಕೆ ಅವಕಾಶವೆಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್. ಎಂ ವಿಶ್ವೇಶ್ವರಯ್ಯ, ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್ಸಿಎಲ್ ತನ್ನ ಹೌಸ್ ಜರ್ನಲ್ನಲ್ಲಿ ಉಲ್ಲೇಖಿಸಿದೆ.
ಮೂಲಗಳ ಪ್ರಕಾರ ಮಳಿಗೆಗಳ ಸ್ಥಾಪನೆಗಾಗಿ ಬಿಎಂಆರ್ಸಿಎಲ್ ಟೆಂಡರ್ ಕರೆದಿದ್ದು, ಆ ಟೆಂಡರ್ ಅಮುಲ್ ಪಾಲಾಗಿದೆ ಎನ್ನಲಾಗುತ್ತಿದೆ. ಆ ಮೂಲಕ ಹಾಲು, ಚಾಕೊಲೇಟ್ಗಳು, ಐಸ್ಕ್ರೀಮ್, ತ್ವರಿತ ಆಹಾರ ಉತ್ಪನ್ನಗಳು ಮತ್ತು ತಿಂಡಿಗಳನ್ನು ಖರೀದಿಸಬಹುದಾಗಿದೆ. ಇದು ಮೆಟ್ರೋ ನಿಲ್ದಾಣ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದೆ.
ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗುವುದರೊಂದಿಗೆ ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿದೆ. ಕರ್ನಾಟಕದ ನಂದಿನಿ ಇರುವಾಗ ಗುಜರಾತ್ನ ಅಮುಲ್ಗೆ ಏಕೆ ಅವಕಾಶ ಎಂದು ಆಕ್ರೋಶವಾಗುತ್ತಿದೆ. ಅಷ್ಟೇ ಅಲ್ಲದೆ ಇದು ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿದೆ.

https://twitter.com/JanataDal_S?ref_src=twsrc%5Etfw%7Ctwcamp%5Etweetembed%7Ctwterm%5E1934859835356615067%7Ctwgr%5E4b609d95f42a043d83a79d78524f4293ef6982d1%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbmrcl-proposes-to-set-up-amul-shops-at-metro-stations-in-bengaluru-public-raises-objections-1040034.html
ಡೂಪ್ಲಿಕೇಟ್ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ ಎಂದ ಜೆಡಿಎಸ್
ಈ ಕುರಿತಾಗಿ ಜೆಡಿಎಸ್ ಟ್ವೀಟ್ ಮಾಡಿದ್ದು, ಕಮಿಷನ್ ಆಸೆಗೆ ಸ್ವಾಭಿಮಾನ ಮಾರಿಕೊಂಡ ಡಿಕೆ ಶಿವಕುಮಾರ್! ಡೂಪ್ಲಿಕೇಟ್ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ. ಚುನಾವಣೆಗೂ ಮುಂಚೆ #SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆ ಶಿವಕುಮಾರ್, ಕಮಿಷನ್ ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ ಎಂದು ವಾಗ್ದಾಳಿ ಮಾಡಿದೆ.
ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗೆ ಅವಕಾಶ ನೀಡಲಾಗಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ನಂದಿನಿಯನ್ನು ಮರೆತು, ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಮಾರುಕಟ್ಟೆ ಸೃಷ್ಟಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಕನ್ನಡಿಗರ ಹೆಮ್ಮೆಯ ಬ್ರಾಂಡ್ “ನಂದಿನಿ”ಯ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಕಿಡಿಕಾರಿದೆ.

[…] ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥ… […]
[…] ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥ… […]