
ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ
ಕೇಂದ್ರ ಸರ್ಕಾರವು 2025ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿ (Padma Awards) ಪುರಸ್ಕೃತರ ಹೆಸರುಗಳನ್ನು ಪ್ರಕಟಿಸಿದೆ. ಈ ಬಾರಿ 30 ಮಂದಿಗೆ ಪ್ರಶ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ
- ಕಲೆ, ಸಮಾಜುಮುಖಿ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಹಾಗೂ ಎಂಜಿನಿಯರಿಂಗ್, ವ್ಯಾಪಾರ ಹಾಗೂ ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗ ಪದ್ಮ ಪ್ರಶಸ್ತಿಯನ್ನು (Padma Awards) ಕೇಂದ್ರ ಸರ್ಕಾರ ನೀಡುತ್ತದೆ.
ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿಯ ಗೌರವ:
ಕಲಾ ವಿಭಾಗದಲ್ಲಿನ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ. ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಅರಕಲಗೂಡು ಸೂರ್ಯಪ್ರಕಾಶ್ ಮತ್ತು ಕಲಾ ವಿಭಾಗದಲ್ಲಿನ ಸಾಧನೆಗಾಗಿ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.
ತೊಗಲು ಗೊಂಬೆಯಾಟದ ಹಿರಿಯ ಕಲಾವಿದದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್, ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ ವೈದ್ಯೆ ಡಾ. ವಿಜಯಲಕ್ಷ್ಮೀ ದೇಶಮಾನೆ. ಚಲನಚಿತ್ರ ನಿರ್ಮಾಪಕ ಹಾಸನ ರಘು, ಉದ್ಯಮಿ ಪ್ರಶಾಂತ್ ಪ್ರಕಾಶ್ ಮತ್ತು ಸಂಗೀತ ನಿರ್ದೇಶಕ ರಿಕಿ ಕೇಜ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.