ಶೃಂಗೇರಿಯಲ್ಲಿ ಮತ್ತೆ ಗುಡ್ಡ ಕುಸಿತ – ರಸ್ತೆಗಳ ಸಂಚಾರಕ್ಕೆ ಅಡ್ಡಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಶೃಂಗೇರಿ-ಕಾರ್ಕಳ ರಸ್ತೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಬಂದ್ ಮಾಡಿದ್ದು, ಸ್ಥಳದಲ್ಲಿ ಜೆಸಿಬಿ, ಎನ್.ಎಚ್. ಅಧಿಕಾರಿಗಳು ಹಾಗೂ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. 6 ತಿಂಗಳ ನಿರಂತರ ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ಗುಡ್ಡ ಮತ್ತೆ ಮತ್ತೆ ಕುಸಿಯುತ್ತಿದೆ.