ಇಸ್ಲಾಮಾಬಾದ್, ಮೇ 09: ಭಾರತ ಮತ್ತು Pakistan ದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಖ್ಯಾತ ಬಲೂಚ್ ಬರಹಗಾರ ಮೀರ್ ಯಾರ್ ಬಲೂಚ್ ಅವರು ಪಾಕಿಸ್ತಾನದಿಂದ ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ವಿಶ್ವಸಂಸ್ಥೆ ಎದುರು ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಬಲೂಚ್ ರಾಯಭಾರ ಕಚೇರಿಯನ್ನು ತೆರೆಯಲು ಅವಕಾಶ ನೀಡಬೇಕೆಂದು ಅವರು ಭಾರತ ಸರ್ಕಾರವನ್ನು ಕೋರಿದ್ದಾರೆ.
ಬಲೂಚ್ ಜನರ ಪರವಾಗಿ ಸದಾ ನಿಲ್ಲುವ ಮಿರ್ ಯಾರ್ ಬಲೂಚ್, ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಪೋಸ್ಟ್ಗಳನ್ನು ಮಾಡಿದ್ದಾರೆ. ಬಲೂಚಿಸ್ತಾನಕ್ಕೆ ಶಾಂತಿಪಾಲನಾ ಪಡೆಗಳನ್ನು ಕಳುಹಿಸುವಂತೆ ಅವರು ವಿಶ್ವಸಂಸ್ಥೆಯನ್ನು ವಿನಂತಿಸಿದರು ಮತ್ತು ಪಾಕಿಸ್ತಾನಿ ಸೈನ್ಯವು ಆ ಪ್ರದೇಶವನ್ನು ತೊರೆಯಬೇಕೆಂದು ಒತ್ತಾಯಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಗಂಭೀರ ಸಂಘರ್ಷದ ಮಧ್ಯೆ ಮಿರ್ ಯಾರ್ ಅವರ ಈ ಹೇಳಿಕೆ ಬಂದಿದೆ. ಮೇ 7 ರಂದು, ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡಿತು.
