
ಹಾಸನ :- 2023-24 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೆಲ ಕೋರ್ಸುಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿದೆ.
ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ನೀಡಿದ ಕಾರಣ ಇಲಾಖೆಯಿಂದ ನಿಗಧಿಪಡಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ ಕೋರ್ಸುಗಳ ವಿದ್ಯಾರ್ಥಿಗಳು ಇಲಾಖೆಗೆ ಮನವಿ ಸಲ್ಲಿಸಿದ್ದು, ಈ ಕೋರ್ಸುಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅ ರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಮಾ.15 ಕ್ಕೆ ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ
ವಿಶೇಷ ಸೂಚನೆ: ಸದರಿ ಅರ್ಜಿಗಳಿಗೆ ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಿದ್ದಲ್ಲಿ 2023-24 ನೇ ಸಾಲಿಗೆ ಶುಲ್ಕ ಮರುಪಾವತಿ ಮಾಡಲು ಕ್ರಮ ವಹಿಸಲಾಗುವುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in/, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ https://bcwd.karnataka.gov.in, , ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಮತ್ತು ಇಮೇಲ್ 8050770005 bcwdhelpline@gmail.co m, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಮತ್ತು ಇಮೇಲ್ postmetrichelp@karnataka.gov.in, 1902 ಕ್ಕೆ ಭೇಟಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.