
ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯನ್ನು (ದೂ.ಸಂ. 08262-295422 ) ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.