
ತುಮಕೂರು : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಶಿಶುಕೇಂದ್ರೀಕೃತ ಯೋಜನೆಯಡಿ ನಡೆಸುತ್ತಿರುವ ವಿಶೇಷ ಶಾಲೆಯನ್ನು ಅನುದಾನಕ್ಕೆ ಒಳಪಡಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಸಂಸ್ಥೆಗಳು ಬೆಂಗಳೂರಿನ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಮತಿ ಪಡೆದು, ಕಳೆದ ೩ ವರ್ಷಗಳಿಂದ ಶಾಲೆಯನ್ನು ನಡೆಸುತ್ತಿರಬೇಕು.
ಆಸಕ್ತ ಸಂಸ್ಥೆಯು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಫೆಬ್ರವರಿ ೨೮ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2270029 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ತಿಳಿಸಿದ್ದಾರೆ.