
ಹಾಸನ : ಅರಕಲಗೂಡು ಪಟ್ಟಣ ಪಂಚಾಯಿತಿಯ 2024-25 ನೇ ಸಾಲಿನ ಎಸ್.ಎಫ್.ಸಿ. ಅನುದಾನದಲ್ಲಿ ಶೇ.5 ರ ಯೋಜನೆಯಡಿ ವಿಶೇಷ ಚೇತನ ಫಲಾನುಭವಿಗಳಿಗೆ ವೈದ್ಯಕೀಯ ವೆಚ್ಚ ಭರಿಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಯ ಜೊತೆ ಅಂಗವಿಕಲ ದೃಢೀಕರಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ವೈದ್ಯಕೀಯ ವೆಚ್ಚದ ಬಿಲ್ಲುಗಳು, ಅರ್ಜಿದಾರರ ಪೂರ್ಣ ಫೋಟೋ, ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಲಗತ್ತಿಸಿ ಮಾ.೫ ರ ಒಳಗೆ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಲಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಷಯ ನಿರ್ವಾಹಕರನ್ನು ಸಂಪರ್ಕಿಸಲು ಅರಕಲಗೂಡು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.