ಕೊರಟಗೆರೆ :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ಅನಂತರಾಜು ತಿಳಿಸಿದ್ದಾರೆ.
ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ 4 ಬಾಲಕರ ಹಾಗೂ 1 ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 6ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸರ್ಕಾರದ ನಿಯಮಾನುಸಾರ ವಿದ್ಯಾರ್ಥಿನಿಲಯ ಪ್ರವೇಶ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಕೊರಟಗೆರೆ ತಾಲೂಕಿನಲ್ಲಿರುವ ವಿದ್ಯಾರ್ಥಿನಿಲಯಗಳಾದ
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ದೊಡ್ಡಸಾಗ್ಗೆರೆ.
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಗೌರಿಬಿದನೂರು.
ರಸ್ತೆ, ಕೊರಟಗೆರೆ ಟೌನ್
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಸಂತೇ ಮೈದಾನ, ತೋವಿನಕೆರೆ.
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಅಮ್ಮಾಜಿ ದೇವಸ್ಥಾನದ ಆವರಣ, ವಡ್ಡಗೆರೆ
ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಮಾರುತಿ ಆಸ್ಪತ್ರೆ ಪಕ್ಕ, ಕೊರಟಗೆರೆ ಟೌನ್.
ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ಅನಂತರಾಜು ಮನವಿ ಮಾಡಿದ್ದಾರೆ.
