ಅರಕಲಗೂಡು, ಜುಲೈ 21 – ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಹಾಗೂ ರೋಟರಿ ಕ್ಲಬ್ ಆಫ್ ಅರಕಲಗೂಡು ಮಿಡ್ ಟೌನ್ ಇವರ ಸಹಯೋಗದೊಂದಿಗೆ, ಹಿರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ದಿ. ದೇವರಾಜು ಎಚ್.ಡಿ.” ನಿವೃತ್ತ ಮುಖ್ಯೋಪಾಧ್ಯಾಯರ ಸ್ಮರಣಾರ್ಥವಾಗಿ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪೆನ್ನುಗಳು ಹಾಗೂ ಸಿಹಿಯನ್ನು ವಿತರಿಸಲಾಯಿತು. ಜೊತೆಗೆ ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಗಿಡ ನೆಡುವ ಮೂಲಕ ಶುಭಾರಂಭವಾಯಿತು.

ಅಂದಾಜು 20ಕ್ಕೂ ಹೆಚ್ಚು ಶಿಬಿರಾರ್ಥಿಗಳು ರಕ್ತದಾನ ಮಾಡಿದ್ದು, 200ಕ್ಕಿಂತ ಹೆಚ್ಚು ಗ್ರಾಮಸ್ಥರು ಉಚಿತ ಆರೋಗ್ಯ ತಪಾಸಣೆಗೆ ಒಳಪಟ್ಟರು.
ಕಾರ್ಯಕ್ರಮದಲ್ಲಿ ರೋಟರಿ ವಲಯ 9ರ ವಲಯ ಸೇನಾನಿ ರೋ. ಶಶಿಧರ್ ಬಿ.ಸಿ., ರೋಟರಿ ಕ್ಲಬ್ ಆಫ್ ಅರಕಲಗೂಡು ಮಿಡ್ ಟೌನ್ ಅಧ್ಯಕ್ಷ ರೋ. ಪ್ರವೀಣ್, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ಹೆಚ್.ಡಿ. ವಜ್ರ ಕುಮಾರ್ ಹಾಗೂ ಕಾರ್ಯದರ್ಶಿ ಕೆ.ಎಸ್. ಯೋಗೇಶ್ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಈ ಮಹತ್ವದ ಸೇವಾ ಕಾರ್ಯದ ಯಶಸ್ಸಿಗೆ ಶ್ರಮಪಟ್ಟು ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ಗಳು ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿವೆ.
