ಕನ್ನಡಿಗರ ಕೋಪಕ್ಕೆ ಕರಗದವರುಂಟೆ?? ಮೆಟ್ರೋ ನಿಲ್ದಾಣದಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ-ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ

ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯುವ ಬಗ್ಗೆ ನಡೆದ ವಿವಾದದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬಿಎಂಆರ್‌ಸಿಎಲ್ ಟೆಂಡರ್ ಕರೆಯುತ್ತಿದ್ದಾಗ ಅಮೂಲ್ ಹೊರತುಪಡಿಸಿ ಯಾವುದೇ ಸಂಸ್ಥೆಗಳು ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್‌ಗೆ ಅರ್ಜಿ ಹಾಕಲು ಸೂಚನೆ ನೀಡಲಾಗಿದ್ದು, 10 ಸ್ಥಳಗಳ ಪೈಕಿ 8 ಕಡೆ ನಂದಿನಿಗೆ ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಈಗಾಗಲೇ ತೆರೆಯಲ್ಪಟ್ಟಿರುವ ಅಮೂಲ್ ಮಳಿಗೆಗಳನ್ನು ಮುಚ್ಚಿಸುವುದು ಸೂಕ್ತವಲ್ಲ ಎಂದೂ ಅವರು ಅಭಿಪ್ರಾಯಪಟ್ಟರು.