ಚನ್ನರಾಯಪಟ್ಟಣ: ಬಕ್ರೀದ್ ಹಬ್ಬದ ಅಂಗವಾಗಿ ಪಟ್ಟಣದ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಶಾಂತಿ, ಸೌಹಾರ್ದತೆ ಹಾಗೂ ದೇಶದ ಪ್ರಗತಿಗಾಗಿ ಪ್ರಾರ್ಥನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಭಾಗವಹಿಸಿ ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಚೌಕ್ ಮಸೀದಿ ಆಡಳಿತಾಧಿಕಾರಿ ಟಿ. ಮುನವರ್ ಪಾಷಾ, ಮಾಜಿ ಪುರಸಭಾ ಸದಸ್ಯ ಆನ್ಸರ್ ಪಾಷಾ, ಅಹಿಂದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಝಬಿವುಲ್ಲಾ ಬೇಗ್, ತಂಝೀಮ್, ಮಹಬೂಬ್ ಪಾಷಾ, ಕೆಡಿಪಿ ಸದಸ್ಯ ಕಬ್ಬಾಳು ಮಹೇಶ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ನಿರ್ದೇಶಕ ನಾಗಸಮುದ್ರ ಬಾಲು, ಕಾಂಗ್ರೆಸ್ ಮುಖಂಡ ಲವಣ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಪ್ರಾರ್ಥನೆಯ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಮುಸ್ಲಿಂ ಬಾಂಧವರು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವ ನೆಲೆಸಲಿ ಎಂದು ಆಶಿಸಿದರು.
– ಮಂಜುನಾಥ್ ಐ.ಕೆ
