ಹಾಸನ: ಜಿಲ್ಲೆಯಲ್ಲಿ ಯನ್ನು ಅದ್ದೂರಿಯಾಗಿ ಆಚರಿಸಲು ಏಪ್ರಿಲ್ 20, 2026 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಈ ಸಂಬಂಧ ಏಪ್ರಿಲ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ರಮೇಶ್ ಅವರ ಅಧ್ಯಕ್ಷತೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ. ತಾರನಾಥ್ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಮ್ಮುಖದಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು.

ಏಪ್ರಿಲ್ 20 ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಲ್ಯಾಣ ಮಂಟಪದ ಮುಂಭಾಗದಿಂದ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ.

ನಂತರ ಬೆಳಿಗ್ಗೆ 11.30ಕ್ಕೆ ಹಾಸನದ ಕಲಾಭವನದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಧಾರ್ಮಿಕ ಸಮಾರಂಭ ಜರುಗಲಿದೆ. ಕಾರ್ಯಕ್ರಮದಲ್ಲಿ ಮಠಾಧೀಶರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ವೀರಶೈವ ಲಿಂಗಾಯತ ಸಮಾಜದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಭೆಯಲ್ಲಿ ಮನವಿ ಮಾಡಲಾಗಿದೆ.
-ಶಿವಕುಮಾರ್ ಕಟ್ಟಾಯ.
