ಹುಬ್ಬಳ್ಳಿ: ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಹೊರಟ್ಟಿ, ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ. 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ರಾಜೀನಾಮೆ ಅಲ್ಲಿಗೆ ಕೈ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಅನ್ ಸೈನಡ್ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ಮಾತನಾಡಿದ್ದಾರೆ . 27ನೇ ತಾರೀಕು ಕೂತು ಮಾತನಾಡಿ ತೀರ್ಮಾನ ಮಾಡೋಣ ಅಂದಿದ್ದಾರೆ . ಹೀಗಾಗಿ ಅದನ್ನ ಅಲ್ಲಿಗೆ ಕೈ ಬಿಟ್ಟಿದ್ದೇನೆ. ಬೆಂಗಳೂರಲ್ಲಿ ಸಭೆ ಮಾಡೋದಾಗಿ ಅಂದು ಕೊಂಡಿದ್ದೇವೆ. ಎಲ್ಲರೂ ಸಹ ನೀವೇ ರಾಜೀನಾಮೆ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ನಾನು ಮಾಡಿದ ತೀರ್ಮಾನಕ್ಕೆ ವಿರೋಧ ಬಂತು . ನಮ್ಮ ಶಾಸನ ಸಭೆ ಸದಸ್ಯರು ನೋಡೋಣ ರಾಜೀನಾಮೆ ಬೇಡ ಎಂದಿದ್ದಾರೆ. ಪುಟ್ಟಣ್ಣ ಕರೆ ಮಾಡಿ ರಾಜೀನಾಮೆ ವಿಷಯದಲ್ಲಿ ಮುಂದುವರಿಬೇಡಿ ಅಂದ್ರು. ಸಾರ್ವಜನಿಕ ವಲಯದಲ್ಲಿ ನನಗೆ ಇಷ್ಟೊಂದು ಗೌರವ ಕೊಡುತ್ತಿರುವುದಕ್ಕೆ ನಾನು ರಾಜೀನಾಮೆಯಿಂದ ಹಿಂದೆ ಸರಿದಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದರು.
