ಬೇಲೂರು, ಜು. 2: ಬೇಲೂರು ಕ್ಷೇತ್ರದ ಮಾಜಿ ಶಾಸಕ ಲಿಂಗೇಶ್ ಅವರ ನಿವಾಸಕ್ಕೆ ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಎ. ಮಂಜು ಭೇಟಿ ನೀಡಿ, ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಪ್ರಕರಣದ ಕುರಿತು ಸಮಾಲೋಚನೆ ನಡೆಸಿದರು.
ಈ ವೇಳೆ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಎ. ಮಂಜು, ಯಾವುದೇ ಸಂಕಷ್ಟದ ಸಂದರ್ಭದಲ್ಲೂ ತಾವು ಅವರೊಂದಿಗೆ ಇರುವುದಾಗಿ ಭರವಸೆ ನೀಡಿದರು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ಕುಟುಂಬದವರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಜಿಲ್ಲಾ ನಿರ್ದೇಶಕ ಎಸ್. ಯೋಗೇಶ್, ಬೇಲೂರು ಟಿಎಪಿಸಿಎಂಎಸ್ ಅಧ್ಯಕ್ಷ ಬಲೆನಹಳ್ಳಿ ರವಿ, ಮಾಜಿ ಪ್ರಧಾನ ಕಾರ್ಯದರ್ಶಿ ಮಹದೇವ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
