ಬೆಂಗಳೂರು, ನ.27: ಬೆಂಗಳೂರು ನಗರ ಪೊಲೀಸರ ಸಹಯೋಗದೊಂದಿಗೆ M5 ಮಹೇಂದ್ರ ಗ್ರೂಪ್ ನಗರದ ಆನೇಕಲ್ ತಾಲೂಕಿನ ಚಂದಾಪುರ ವೃತ್ತದಲ್ಲಿ ಸಂಚಾರ ನಿರ್ವಹಣೆ, ಸಾರ್ವಜನಿಕ ಸುರಕ್ಷತೆ ಹಾಗೂ ನಾಗರಿಕರ ಅನುಕೂಲಕ್ಕಾಗಿ ವಿವಿಧ ಮೂಲಸೌಕರ್ಯ ಸೌಲಭ್ಯಗಳನ್ನು ಉದ್ಘಾಟಿಸಿದೆ.
ಸಂಸ್ಥೆಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಕಾರ್ಯಕ್ರಮದಡಿ ಕೈಗೊಂಡಿರುವ ಈ ಉಪಕ್ರಮದಲ್ಲಿ ಟ್ರಾಫಿಕ್ ಸಿಗ್ನಲ್ಗಳ ಅಳವಡಿಕೆ, ಸಿಸಿಟಿವಿ ಕ್ಯಾಮೆರಾಗಳ ಸ್ಥಾಪನೆ, ಪೊಲೀಸ್ ಬೂತ್, ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಹಾಗೂ ಬಿಎಂಟಿಸಿ ಬಸ್ ತಂಗುದಾಣಗಳನ್ನು ನಿರ್ಮಿಸಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಸಚಿವ ರಾಮಲಿಂಗ ರೆಡ್ಡಿ, ಆನೇಕಲ್ ಕ್ಷೇತ್ರದ ಶಾಸಕ ಬಿ. ಶಿವಣ್ಣ, ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ, M5 ಮಹೇಂದ್ರ ಗ್ರೂಪ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ನಾಗರಾಜ್ ರೆಡ್ಡಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಐಪಿಎಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಚಂದಾಪುರ ವೃತ್ತದಲ್ಲಿ ವಾಹನ ಸಂಚಾರ ನಿಯಂತ್ರಣ, ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಅನುಕೂಲವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಟ್ರಾಫಿಕ್ ಸಿಗ್ನಲ್ ಮತ್ತು ಸಿಸಿಟಿವಿ ವ್ಯವಸ್ಥೆಗಳಿಂದ ಸಂಚಾರ ಮೇಲ್ವಿಚಾರಣೆ ಸುಧಾರಿಸಲಿದ್ದು, ಪಾರ್ಕಿಂಗ್ ವ್ಯವಸ್ಥೆ ಹಾಗೂ ಬಸ್ ತಂಗುದಾಣಗಳಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ, ಸಂಚಾರ ದಟ್ಟಣೆ ಕಡಿಮೆ ಮಾಡುವ ಮೂಲಕ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವಾ ವಾಹನಗಳ ಸುಗಮ ಸಂಚಾರಕ್ಕೂ ನೆರವಾಗುವ ನಿರೀಕ್ಷೆಯಿದೆ.
ಸಾರ್ವಜನಿಕರ ದೈನಂದಿನ ಸಂಚಾರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹಾಗೂ ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಗೆ ನೆರವಾಗುವುದು ಈ ಯೋಜನೆಯ ಪ್ರಮುಖ ಆಶಯವಾಗಿದೆ. ಸಾರ್ವಜನಿಕ ಆಡಳಿತ ವ್ಯವಸ್ಥೆಯೊಂದಿಗೆ ಕೈಜೋಡಿಸಿ ಸಮುದಾಯದ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಲು M5 ಮಹೇಂದ್ರ ಗ್ರೂಪ್ ಮುಂದಾಗಿದೆ.
M5 ಮಹೇಂದ್ರ ಗ್ರೂಪ್ ಕುರಿತು
M5 ಮಹೇಂದ್ರ ಗ್ರೂಪ್ ಮೂರು ದಶಕಗಳಿಗೂ ಹೆಚ್ಚಿನ ಪರಂಪರೆ ಹೊಂದಿರುವ ವೈವಿಧ್ಯಮಯ ಉದ್ಯಮ ಸಮೂಹವಾಗಿದ್ದು, ರಿಯಲ್ ಎಸ್ಟೇಟ್, ನಿರ್ಮಾಣ ಸಾಮಗ್ರಿಗಳು, ಚಿಲ್ಲರೆ ವ್ಯಾಪಾರ, ಕೃಷಿ ಮತ್ತು ಹಣಕಾಸು ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.
ಗ್ರೂಪ್ನ ರಿಯಲ್ ಎಸ್ಟೇಟ್ ವಿಭಾಗವಾದ M5 ಮಹೇಂದ್ರ ಹೋಮ್ಸ್, 55 ಲಕ್ಷ ಚದರ ಅಡಿಗಳಿಗೂ ಅಧಿಕ ಅಭಿವೃದ್ಧಿ ಯೋಜನೆಗಳನ್ನು ತನ್ನ ಪೈಪ್ಲೈನ್ನಲ್ಲಿ ಹೊಂದಿದೆ. ಚಿಲ್ಲರೆ ವ್ಯಾಪಾರ ವಿಭಾಗದ M5 ಎಸಿಟಿ, 150ಕ್ಕೂ ಹೆಚ್ಚು ಬ್ರ್ಯಾಂಡ್ಗಳನ್ನು ಒಳಗೊಂಡ ದಕ್ಷಿಣ ಬೆಂಗಳೂರಿನ ಪ್ರಮುಖ ವಾಣಿಜ್ಯ ತಾಣಗಳಲ್ಲಿ ಒಂದಾಗಿದೆ.
ಗೌರಮ್ಮ ತಿಮರೆಡ್ಡಿ ಫೌಂಡೇಶನ್ ಮೂಲಕ ಸಮುದಾಯ ಅಭಿವೃದ್ಧಿ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಂಸ್ಥೆಯು, ದೀರ್ಘಕಾಲೀನ ಮೌಲ್ಯ ಸೃಷ್ಟಿ, ಸಾಮಾಜಿಕ ಹೊಣೆಗಾರಿಕೆ ಮತ್ತು ಸುಸ್ಥಿರ ಬೆಳವಣಿಗೆಗೆ ಬದ್ಧವಾಗಿದೆ.
