ಬೆಂಗಳೂರು : ರಾಜ್ಯದಲ್ಲಿ ಮಾಲೀಕರ ಹೆಸರಿನಲ್ಲಿರುವ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಾತನಾಡಿ, ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕರ ಹೆಸರಿನಲ್ಲಿ ದಾಖಲಾಗಿರುವ ಅನೇಕ ಪ್ರಕರಣಗಳು ಮುಂದುವರಿದಿವೆ. ಇಂತಹ ಎಲ್ಲಾ ರಸ್ತೆಗಳು ಇದೀಗ ಸಾರ್ವಜನಿಕರ ಸೌಲಭ್ಯಕ್ಕಾಗಿ ಸರ್ಕಾರಿ ರಸ್ತೆಗಳಲ್ಲಿ ಸೇರ್ಪಡೆಯಾಗಲಿವೆ ಎಂದು ತಿಳಿಸಿದ್ದಾರೆ.
ಅದೇ ವೇಳೆ, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ನಂಬಿಕೆ ನಕ್ಷೆ ಯೋಜನೆಯಡಿ ಈಗಾಗಲೇ 9 ಸಾವಿರ ನಕ್ಷೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, 7.5 ಲಕ್ಷ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಅಭಿವೃದ್ದಿ ಹೊಂದಿದ ಜಮೀನು ಎಂಬ ಶ್ರೇಯಸ್ಸಿನಲ್ಲಿ ಮಾರ್ಗಸೂಚಿ ದರದ ಶೇ.5.5 ರಷ್ಟು ಶುಲ್ಕ ಪಾವತಿಸಿಕೊಂಡು ಎ ಖಾತೆ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.
