ಬೆಂಗಳೂರು: ಲಕ್ಷಗಟ್ಟಲೆ ಲಂಚಕ್ಕೆ- ಮಹಿಳಾ ಪಿಎಸ್‌ಐ ಲೋಕಾಯುಕ್ತರ ಬಲೆಗೆ

ಬೆಂಗಳೂರು ಗೋವಿಂದರಾಜಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ₹1.25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಈ ಲಂಚ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.