ಬೆಂಗಳೂರು : ಸೆ.10ರಿಂದ ಕೌನ್ಸಿಲಿಂಗ್ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ ಆರಂಭ : ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಮೊದಲ ಬಾರಿಗೆ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಸೆ.10ರಿಂದ 20ರವರೆಗೆ ಕಡ್ಡಾಯ ವರ್ಗಾವಣೆ ಹಾಗೂ ಸೆ.23-24ರಂದು ಸಾಮಾನ್ಯ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಜರುಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.