ಬೆಂಗಳೂರು, ನ. 13: ಯಲಹಂಕ ಸಮೀಪದ ಥಣಿಸಂದ್ರದಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ) ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಸಂಸ್ಕೃತಿ, ಕನ್ನಡ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಾಗಿ ಸಿಂಧಿ ಸೇವಾ ಸಮಿತಿ ಅಧ್ಯಕ್ಷ ಪ್ರಕಾಶ್ ಎಫ್. ಮಾಧ್ವಾನಿ ಹಾಗೂ ಸಿಂಧಿ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಅಶೋಕ್ ಆರ್. ನಾರಂಗ್ ಅವರು ಡಾ. ರಾಮಲಿಂಗೇಶ್ವರರನ್ನು ಗೌರವಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಜಂಟಿ ಕಾರ್ಯದರ್ಶಿ ಪೂಜಾ ಠಕ್ಕರ್, ರೋಹಿತ್ ಆರ್. ಕುಕ್ರೇಜ, ರಾಜೇಶ್ ಬಜಾಜ್, ಪ್ರಿನ್ಸಿಪಾಲ್ ಡಾ. ನಂದ, ಉಪಪ್ರಾಂಶುಪಾಲೆ ಪ್ರೊ. ಕಾಂಚನ, ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಅನಂತ ಕೆ. ಆರ್. ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಜ್ಯೋತ್ಸವದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ನೃತ್ಯ, ಗಾಯನ ಮತ್ತು ಕವನ ವಾಚನಗಳ ಮೂಲಕ ಕನ್ನಡ ಸಂಸ್ಕೃತಿಯ ವೈಭವವನ್ನು ಪ್ರದರ್ಶಿಸಿದರು.

