ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಾಂತ್ವನ ಹೇಳಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


[…] ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ… […]