ಬೆಂಗಳೂರು: ಸರ್ಕಾರದಿಂದ ನೇರವಾಗಿ ಹಾಗೂ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಅರ್ಹ ‘ಎ’, ‘ಬಿ’ ಮತ್ತು ‘ಸಿ’ ಗುಂಪಿನ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಉಲ್ಲೇಖಿತ ಪತ್ರದಲ್ಲಿ, ಎಲ್ಲಾ ಅರ್ಹ ‘ಎ’, ‘ಬಿ’ ಮತ್ತು ‘ಸಿ’ ಗುಂಪಿನ ಅಧಿಕಾರಿಗಳು/ನೌಕರರು ದಿನಾಂಕ 15.12.2025 ರೊಳಗಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಬೇಕು ಹಾಗೂ ನಿಗದಿತ ಅವಧಿಯಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು.
ಆದರೆ, ಹಲವು ಅಧಿಕಾರಿಗಳು ಮತ್ತು ನೌಕರರು ಸಂಬಳ ಪ್ಯಾಕೇಜ್ ನೋಂದಣಿಗೆ ಹೆಚ್ಚಿನ ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ, ಸರ್ಕಾರವು ಅವರ ಮನವಿಯನ್ನು ಪರಿಗಣಿಸಿ ನೋಂದಣಿ ಅವಧಿಯನ್ನು ವಿಸ್ತರಿಸಿದೆ.ಅದರಂತೆ,
‘ಎ’ ಮತ್ತು ‘ಬಿ’ ಗುಂಪಿನ ಅಧಿಕಾರಿಗಳು,
‘ಸಿ’ ಗುಂಪಿನ ನೌಕರರು,
ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ 16.01.2026 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ನಿಗದಿತ ಅವಧಿಯೊಳಗೆ ನೋಂದಣಿ ಪೂರ್ಣಗೊಳಿಸುವುದು ಕಡ್ಡಾಯವಾಗಿದ್ದು, ವಿಳಂಬವಾದಲ್ಲಿ ಸಂಬಂಧಿಸಿದ ನಿಯಮಾನುಸಾರ ಕ್ರಮ ಜರುಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

