ಬೆಂಗಳೂರು: ಕೆಂಗೇರಿ ಸ್ಯಾಟಲೈಟ್ ಟೌನ್ನ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ವತಿಯಿಂದ IQAC ಆಶ್ರಯದಲ್ಲಿ ಆಯೋಜಿಸಿದ್ದ ‘ತರಂಗಿಣಿ–2K26’ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ ಅದ್ದೂರಿಯಾಗಿ ನಡೆಯಿತು.
ರಾಜ್ಯದ ವಿವಿಧ ಭಾಗಗಳ ಸುಮಾರು 35 ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಉತ್ಸವದಲ್ಲಿ ಭಾಗವಹಿಸಿ ಸಾಂಸ್ಕೃತಿಕ, ಕ್ರೀಡಾ ಹಾಗೂ ಬೌದ್ಧಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಸುಪ್ರಸಿದ್ಧ ನಟ–ನಿರ್ಮಾಪಕ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಮತ್ತು ಹಾಸ್ಯನಟ ಮಹಾಂತೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ನಟ, ಗಾಯಕ ಹಾಗೂ ರಂಗಕಲಾವಿದ ಕಲಾರತಿ ಮಹದೇವ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಸುರಾನಾ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ ಎನ್. ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಮಂಜುನಾಥ್ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಪೂರ್ಣಿಮಾ ಎಸ್. ಮತ್ತು ಹರೀಶ್ ಜಿ. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಹಾಗೂ ತಂಡಭಾವನೆಗೆ ವೇದಿಕೆ ಕಲ್ಪಿಸಿದ ‘ತರಂಗಿಣಿ–2K26’ ಉತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.
