
ಅಧ್ಯಾಯ-1
ಶ್ಲೋಕ – 16
ಅನಂತವಿಜಯಂ ರಾಜಾ ಕುಂತೀಪುತ್ರೋ ಯುಧಿಷ್ಠಿರಃ ।
ನಕುಲಃ ಸಹದೇವಶ್ಚ ಸುಘೋಷಮಣಿಪುಷ್ಪಕೌ ॥೧೬॥
ನಕುಲಃ ಸಹದೇವಶ್ಚ ಸುಘೋಷಮಣಿಪುಷ್ಪಕೌ ॥೧೬॥
ಅನಂತವಿಜಯಮ್ ರಾಜಾ ಕುಂತೀಪುತ್ರಃ ಯುಧಿಷ್ಠಿರಃ –
ನಕುಲಃ ಸಹದೇವಃ ಚ ಸುಘೋಷ ಮಣಿಪುಷ್ಪಕೌ-
ಕುಂತೀಪುತ್ರನಾದ ರಾಜ ಯುಧಿಷ್ಠಿರ ಅನಂತವಿಜಯವನ್ನು,
ನಕುಲ ಸಹದೇವರು ಸುಘೋಷ ಮತ್ತು ಮಣಿಪುಷ್ಪವೆಂಬ ಶಂಖವನ್ನೂದಿದರು.
ಭೀಮನ ನಂತರ ಕುಂತಿಯ ಹಿರಿಮಗ, ದೊರೆ ಯುಧಿಷ್ಠಿರ- ಧರ್ಮ ಮತ್ತು ವಿಜಯದ ಸಂಕೇತವಾದ ‘ಅನಂತವಿಜಯ‘ ಎನ್ನುವ ಶಂಖವನ್ನು ಊದಿದನು. ನಕುಲ ಹಾಗು ಸಹದೇವರು ಸುಘೋಷ ಮತ್ತು ಮಣಿಪುಷ್ಪವೆಂಬ ಶಂಖವನ್ನು ಕ್ರಮಬದ್ಧವಾಗಿ ಮೊಳಗಿಸಿದರು.
ಮಹಾಭಾರತದಲ್ಲಿ ಬೇರೆ ಯಾವ ರಾಜರ ಶಂಖದ ಹೆಸರಿನ ಬಗ್ಗೆ ಉಲ್ಲೇಖ ಇಲ್ಲ. ಎಲ್ಲಿಯೂ ಬೇರೆ ಶಂಖದ ಹೆಸರನ್ನು ಹೇಳಿಲ್ಲ. ಪಾಂಡವರ ಐದು ಶಂಖಗಳ ಹೆಸರನ್ನು ಭಗವದ್ಗೀತೆಯಲ್ಲಿ ಮಾತ್ರ ಕಾಣಬಹುದು. ಪ್ರಾಯಶಃ ಇದು ನಮಗೆ ನಿತ್ಯ ಸ್ಮರಣೀಯವಾಗಿರಬೇಕು ಎನ್ನುವ ಉದ್ದೇಶದಿಂದ ಗೀತೆಯಲ್ಲಿ ಈ ಐದು ಹೆಸರನ್ನು ವಿಶೇಷವಾಗಿ ಉಲ್ಲೇಖಿಸಿರಬಹುದು.