
Bhagavad Gita
ಅಧ್ಯಾಯ-1
ಶ್ಲೋಕ – 8
ಭವಾನ್ ಭೀಷ್ಮಶ್ಚ ಕರ್ಣಶ್ಚ ಕೃಪಶ್ಚ ಸಮಿತಿಂಜಯಃ ।
ಅಶ್ವತ್ಥಾಮಾ ವಿಕರ್ಣಶ್ಚ ಸೌಮದತ್ತಿಸ್ತಥೈವ ಚ ॥೮॥
ಭವಾನ್ ಭೀಷ್ಮಃ ಚ ಕರ್ಣಃ ಚ ಕೃಪಃ ಚ ಸಮಿತಿಮ್ ಜಯಃ ಅಶ್ವತ್ಥಾಮಾ ವಿಕರ್ಣಃ ಚ ಸೌಮದತ್ತಿಃ ತಥಾ ಏವ ಚ- ಪೂಜ್ಯನಾದ ನೀನು, ಭೀಷ್ಮ ಮತ್ತು
ಕರ್ಣ, ಕೃಪ ಕೂಡಾ ಗೆಲುಗಾರ. ಅಶ್ವತ್ಥಾಮಾ ಮತ್ತು ವಿಕರ್ಣ; ಸೋಮದತ್ತನ ಮಗ ಭೂರಿಶ್ರವ ಕೂಡಾ. ಪಾಂಡವ ಸೇನೆಯಲ್ಲಿ-ಸೇನಾಧಿಪತಿ
ಇಲ್ಲಿ ನಾವು ವಿವರವಾಗಿ ನೋಡಿದರೆ ಕೌರವನ ಕಡೆಯಲ್ಲಿ ಹನ್ನೊಂದು ಅಕ್ಷೋಹಿಣಿ ಸೈನ್ಯವನ್ನು ಮುನ್ನೆಡೆಸಬಲ್ಲ ವೀರರಿದ್ದರು. ಆತನ ತೊಬತ್ತೊಂಬತ್ತು ಮಂದಿ ತಮ್ಮಂದಿರರಿದ್ದರು. ಶಲ್ಯ ಭಗದತ್ತರಂತಹ ವೀರಾದಿವೀರರು ದುರ್ಯೋಧನನ ಕಡೆಗಿದ್ದರು. ಆದರೆ ಪಾಂಡವರ ಸೈನ್ಯವನ್ನು ನೋಡಿ ಭಯಗೊಂಡು, ಇದನ್ನೆಲ್ಲವನ್ನು ಮರೆತ ದುರ್ಯೋಧನ, ತನ್ನ ಕಡೆ ಇರುವ ಮಹಾ ವೀರರ ಬಗೆಗೆ ಕೇವಲವಾಗಿ ಮಾತನಾಡುತ್ತಾನೆ!
ಇಲ್ಲಿ ಮಾನಸಿಕವಾಗಿ ದುರ್ಯೋಧನ ಎಷ್ಟೊಂದು ವಿಚಲಿತನಾಗಿದ್ದ ಎನ್ನುವುದು ನಮಗೆ ಸ್ಪಷ್ಟವಾಗಿ ಕಾಣುತ್ತದೆ. ಯುದ್ಧ ಪರಿಣಾಮದ ಬಗ್ಗೆ ಯೋಚಿಸುತ್ತ, ಆತ ತನ್ನ ಕರ್ತವ್ಯವನ್ನೇ ಮರೆತಿದ್ದ!
ಮುಂದುವರೆಯುವುದು………..