“ಭಗವದ್ಗೀತೆ” “ಅಧ್ಯಾಯ-10 ಶ್ಲೋಕ – 24”

ಮುಂದುವರಿದು ಕೃಷ್ಣ ಹೇಳುತ್ತಾನೆ: “ಸರಸಾಮಸ್ಮಿ ಸಾಗರಃ” ಎಂದು. ಭೂಮಿಯ ಮೇಲಿನ ಅಪಾರ ಸಂಪತ್ತಿನ ತಾಣ ಮೇರು ಪರ್ವತವಾದರೆ, ರಸದಿಂದ ಸಹಿತವಾದ, ಜಲಾಶಯಗಳಲ್ಲಿ ಬಹಳ ದೊಡ್ಡದಾಗಿರುವುದು ಸಾಗರ. “ಅದರಲ್ಲಿ ವಿಭೂತಿಯಾಗಿ ನಾನಿದ್ದೇನೆ” ಎನ್ನುತ್ತಾನೆ ಕೃಷ್ಣ.