ಶ್ಲೋಕ – 22
ರುದ್ರಾದಿತ್ಯಾ ವಸವೋ ಯೇ ಚ ಸಾಧ್ಯಾ ವಿಶ್ವೇSಶ್ವಿನೌ ಮರುತಶ್ಚೋಷ್ಮಪಾಶ್ಚ ।
ಗಂಧರ್ವಯಕ್ಷಾಸುರಸಿದ್ಧಸಂಘಾ ವೀಕ್ಷಂತೇ ತ್ವಾಂ ವಿಸ್ಮಿತಾಶ್ಚೈವ ಸರ್ವೇ ॥೨೨॥
ರುದ್ರ ಆದಿತ್ಯಾಃ ವಸವಃಯೇ ಚ ಸಾಧ್ಯಾಃ ವಿಶ್ವೇ ಅಶ್ವಿನೌ ಮರುತಃಚ ಉಷ್ಮಪಾಃ ಚ ।
ಗಂಧರ್ವ ಯಕ್ಷ ಅಸುರ ಸಿದ್ಧ ಸಂಘಾಃ ವೀಕ್ಷಂತೇ ತ್ವಾಮ್ ವಿಸ್ಮಿತಾಃ ಚ ಏವ ಸರ್ವೇ –ರುದ್ರರು, ಆದಿತ್ಯರು, ವಸುಗಳು, ಸಾಧ್ಯರು, ವಿಶ್ವೇದೇವತೆಗಳು, ಅಶ್ವಿಗಳು, ಮರುತ್ತುಗಳು, ಪಿತೃಗಳು, ಗಂಧರ್ವರು, ಯಕ್ಷರು, ಅಸುರರು, ಸಿದ್ಧರು,-ಇವರೆಲ್ಲ ಗುಂಪುಗೂಡಿ ನಿಬ್ಬೆರಗಾಗಿ ನೋಡುತ್ತಿದ್ದಾರೆ ನಿನ್ನನ್ನು.
ಏಕಾದಶರುದ್ರರು, ದ್ವಾದಶಾದಿತ್ಯರು, ಅಷ್ಟವಸುಗಳು, ಸಾಧ್ಯರು, ವಿಶ್ವೇದೇವತೆಗಳು, ಅಶ್ವಿಗಳು, ಮರುತ್ತುಗಳು, ಪಿತೃಗಳು, ಗಂಧರ್ವರು, ದೇವಗಣ ಪ್ರವಿಷ್ಟರಾದ ಯಕ್ಷರು, ಅಸುರರು, ಸಿದ್ಧರು,-ಇವರೆಲ್ಲರೂ ನಿಬ್ಬೆರಗಾಗಿ ನಿನ್ನನ್ನು ನೋಡುತ್ತಿದ್ದಾರೆ ಎನ್ನುತ್ತಾನೆ ಅರ್ಜುನ.
