ಶ್ಲೋಕ – 29
ಯಥಾ ಪ್ರದೀಪ್ತಂ ಜ್ವಲನಂ ಪತಂಗಾಃ ವಿಶಂತಿ ನಾಶಾಯ ಸಮೃದ್ಧವೇಗಾಃ ।
ತಥೈವ ನಾಶಾಯ ವಿಶಂತಿ ಲೋಕಾಸ್ತವಾಪಿ ವಕ್ತ್ರಾಣಿ ಸಮೃದ್ಧವೇಗಾಃ ॥೨೯॥
ಯಥಾ ಪ್ರದೀಪ್ತಮ್ ಜ್ವಲನಮ್ ಪತಂಗಾಃ ವಿಶಂತಿ ನಾಶಾಯ ಸಮೃದ್ಧ ವೇಗಾಃ ।
ತಥಾ ಏವ ನಾಶಾಯ ವಿಶಂತಿ ಲೋಕಾಃ ತವ ಅಪಿ ವಕ್ತ್ರಾಣಿ ಸಮೃದ್ಧ ವೇಗಾಃ –ಲೋಕದ ಮಂದಿಯೆಲ್ಲ ಗಡಬಡಿಸಿ ಓಡುತ್ತ ಬಂದು ಸಾಯಲೆಂದು ನಿನ್ನ ಬಾಯ್ಗಳಲ್ಲಿ ಬೀಳುತ್ತಿವೆ- ಪತಂಗಗಳು ಹಾರಿ ಬಂದು ಬೆಂಕಿಯಲ್ಲಿ ಬಿದ್ದು ಸಾಯುವಂತೆ.
ಪಾಪಿಗಳು ಹೇಗೆ ಭಗವಂತನ ಬಾಯಿಯನ್ನು ಪ್ರವೇಶಿಸುತ್ತಿದ್ದಾರೆ ಎಂದು ವರ್ಣಿಸುತ್ತ ಅರ್ಜುನ ಹೇಳುತ್ತಾನೆ: “ಉರಿಯುವ ಬೆಂಕಿಗೆ ಪತಂಗಗಳು ಬಿದ್ದು ನಾಶವಾದಂತೆ ಗಡಬಡಿಸಿ ಬಂದು ಬಿದ್ದು ನಾಶವಾಗುತ್ತಿದ್ದಾರೆ” ಎಂದು.
