ಶ್ಲೋಕ – 31
ಆಖ್ಯಾಹಿ ಮೇ ಕೋ ಭವಾನುಗ್ರರೂಪೋ ನಮೋSಸ್ತು ತೇ ದೇವವರ ಪ್ರಸೀದ ।
ವಿಜ್ಞಾತುಮಿಚ್ಛಾಮಿ ಭವಂತಮಾದ್ಯಂ ನಹಿ ಪ್ರಜಾನಾಮಿ ತವ ಪ್ರವೃತ್ತಿಮ್ ॥೩೧॥
ಆಖ್ಯಾಹಿ ಮೇ ಕಃ ಭವಾನ್ ಉಗ್ರ ರೂಪಃ ನಮಃ ಅಸ್ತು ತೇ ದೇವ ವರ ಪ್ರಸೀದ ।
ವಿಜ್ಞಾತುಮ್ ಇಚ್ಛಾಮಿ ಭವಂತಮ್ ಆದ್ಯಮ್ ನ ಹಿ ಪ್ರಜಾನಾಮಿ ತವ ಪ್ರವೃತ್ತಿಮ್ –ಹೇಳು ನನಗೆ: ಅಂಜಿಸುವ ರೂಪ ತಳೆದು ಬಂದ ನಿನ್ನ ಬಿತ್ತರವೇನು? ಓ ಹಿರಿಯ ದೈವತವೆ, ನಿನಗೆ ತಲೆಬಾಗುತಿದ್ದೇನೆ. ದಯೆದೋರು. ಎಲ್ಲಕ್ಕೂ ಮೊದಲಿರುವ ನಿನ್ನನ್ನು ತಿಳಿಯ ಬಯಸುತ್ತೇನೆ.ನಿನ್ನ ಉದ್ದೇಶವೇನು ಎಂದು ತಿಳಿಯುತ್ತಿಲ್ಲ.
ಈ ನಿನ್ನ ಭಯಂಕರ ರೂಪವನ್ನು ಕಂಡು ನನಗೇನು ಅರ್ಥವಾಗುತ್ತಿಲ್ಲ. ನಿನ್ನ ಮಹಿಮೆ ಅರಿಯದಾಗಿದ್ದೇನೆ. ನಿನ್ನಲ್ಲಿ ನಾನು ಶರಣು ಬಂದಿದ್ದೇನೆ. ನನ್ನನ್ನು ಉದ್ಧರಿಸು. ಈ ಭಯಂಕರ ರೂಪ ತೊಟ್ಟ ನಿನ್ನನ್ನು ತಿಳಿಯಬಯಸುತ್ತಿದ್ದೇನೆ. ಎಂದು ಅರ್ಜುನ ಕೃಷ್ಣನಲ್ಲಿ ಕೇಳಿಕೊಳ್ಳುತ್ತಾನೆ.
