ಶ್ಲೋಕ – 33
ತಸ್ಮಾತ್ ತ್ವಮುತ್ತಿಷ್ಠ ಯಶೋ ಲಭಸ್ವ ಜಿತ್ವಾ ಶತ್ರೂನ್ ಭುಂಕ್ಷ್ವ ರಾಜ್ಯಂ ಸಮೃದ್ಧಮ್ ।
ಮಯೈವೈತೇ ನಿಹತಾಃ ಪೂರ್ವಮೇವ ನಿಮಿತ್ತಮಾತ್ರಂ ಭವ ಸವ್ಯಸಾಚಿನ್ ॥೩೩॥
ತಸ್ಮಾತ್ ತ್ವಮ್ ಉತ್ತಿಷ್ಠ ಯಶಃ ಲಭಸ್ವ ಜಿತ್ವಾ ಶತ್ರೂನ್ ಭುಂಕ್ಷ್ವ ರಾಜ್ಯಮ್ ಸಮೃದ್ಧಮ್ ।
ಮಯಾ ಏವ ಏತೇ ನಿಹತಾಃ ಪೂರ್ವಮ್ ಏವ ನಿಮಿತ್ತ ಮಾತ್ರಮ್ ಭವ ಸವ್ಯಸಾಚಿನ್ –ಆದ್ದರಿಂದ ನೀನೆದ್ದು ನಿಲ್ಲು.ಹಗೆಗಳನ್ನು ಗೆದ್ದು ಹೆಸರು ಗಳಿಸು. ಅರಸೊತ್ತಿಗೆಯ ತುಂಬು ಸಿರಿಯನುಣ್ಣು. ನಾನೆ ಇವರನ್ನು ಈ ಮೊದಲೆ ಕೊಂದಾಗಿದೆ. ಓ ಸವ್ಯಸಾಚಿ(ಎಡದಿಂದಲೂ ಬಾಣ ಪ್ರಯೋಗಿಸಬಲ್ಲ ನಿಪುಣ ಯೋಧ) , ನೀನು ಬರಿಯ ನೆಪಮಾತ್ರನಾಗು
ಅರ್ಜುನನನ್ನು ಕೃಷ್ಣ ಹುರಿದುಂಬಿಸುತ್ತಿದ್ದಾನೆ. ಎದ್ದೇಳು, ಯುದ್ಧಕ್ಕೆ ಸಿದ್ಧನಾಗು. ಈ ಯುದ್ಧದಲ್ಲಿ ನೀನು ಗೆಲ್ಲುತ್ತೀಯ. ಈ ಶತ್ರುಗಳನ್ನು ಸಂಹಾರ ಮಾಡು. ಏಕೆಂದರೆ ನಾನು ಇವರನ್ನು ಈಗಾಗಲೇ ಕೊಂದಾಗಿದೆ. ಇಲ್ಲಿ ನೀನು ಕೇವಲ ನಿಮಿತ್ತ ಮಾತ್ರ. ನಿನ್ನ ಪಾಲಿಗೆ ಬಂದ ಕರ್ತವ್ಯವನ್ನು ನಿರ್ವಹಿಸಿ, ನಿನ್ನ ಪಾಲಿನ ಸುಖ ಪ್ರರಾಬ್ಧವನ್ನು ಅನುಭವಿಸು.
