ಶ್ಲೋಕ – 38
ತ್ವಮಾದಿದೇವಃ ಪುರುಷಃ ಪುರಾಣಃ ತ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ ।
ವೇತ್ತಾSಸಿ ವೇದ್ಯಂ ಚ ಪರಂ ಚ ಧಾಮ ತ್ವಯಾ ತತಂ ವಿಶ್ವಮನಂತರೂಪ ॥೩೮॥
ತ್ವಮ್ ಆದಿದೇವಃ ಪುರುಷಃ ಪುರಾಣಃ ತ್ವಮ್ ಅಸ್ಯ ವಿಶ್ವಸ್ಯ ಪರಮ್ ನಿಧಾನಮ್ ।
ವೇತ್ತಾ ಅಸಿ ವೇದ್ಯಮ್ ಚ ಪರಮ್ ಚ ಧಾಮ ತ್ವಯಾ ತತಮ್ ವಿಶ್ವಮ್ ಅನಂತರೂಪ –ನೀನು ದೇವತೆಗಳಿಗೂ ಮೊದಲಿಗೆ. ಪುರಾಣಪುರುಷ. ನೀನು ಈ ಜಗದ ಹಿರಿಯಾಸರೆ. ಎಲ್ಲವನ್ನು ತಿಳಿದವನು. ಎಲ್ಲರೂ ತಿಳಿಯಬೇಕಾದವನು. ಹಿರಿಯ ಬೆಳಕು. ಓ ಅನಂತರೂಪನೆ, ಇಡಿಯ ವಿಶ್ವ ನಿನ್ನಿಂದ ತುಂಬಿದೆ.
ನೀನು ಆದಿದೇವಃ, ನೀನು ಪುರಾಣಪುರುಷಃ, ಈ ಜಗತ್ತಿನಲ್ಲಿ ಕೊನೆಯಾಸರೆ ನೀನು. ಎಲ್ಲರೂ ತಿಳಿಯಬೇಕಾದವನು, ಎಲ್ಲವನ್ನೂ ತಿಳಿದ ನೀನು ಎಲ್ಲವನ್ನು ಮೀರಿದ ಪರಂಧಾಮ. ಅನಂತರೂಪನಾದ ನೀನು ಇಡೀ ವಿಶ್ವವನ್ನು ವ್ಯಾಪಿಸಿ ನಿಂತಿದ್ದೀಯ.
