ಶ್ಲೋಕ – 39
ವಾಯುರ್ಯಮೋSಗ್ನಿರ್ವರುಣಃ ಶಶಾಂಕಃ ಪ್ರಜಾಪತಿಸ್ತ್ವಂ ಪ್ರಪಿತಾಮಹಶ್ಚ ।
ನಮೋ ನಮಸ್ತೇSಸ್ತು ಸಹಸ್ರಕೃತ್ವಃ ಪುನಶ್ಚ ಭೂಯೋSಪಿ ನಮೋ ನಮಸ್ತೇ ॥೩೯॥
ವಾಯುಃ ಯಮಃ ಅಗ್ನಿಃ ವರುಣಃ ಶಶಾಂಕಃ ಪ್ರಜಾಪತಿಃ ತ್ವಮ್ ಪ್ರಪಿತಾಮಹಃ ಚ ।
ನಮಃ ನಮಃ ತೇ ಅಸ್ತು ಸಹಸ್ರಕೃತ್ವಃ ಪುನಃ ಚ ಭೂಯಃ ಅಪಿ ನಮಃ ನಮಃ ತೇ –ವಾಯು, ಯಮ, ಅಗ್ನಿ, ವರುಣ, ಚಂದ್ರ, ಪ್ರಜಾಪತಿ ಎಲ್ಲ ನೀನೆ. [ವ=ಬಲರೂಪ, ಆಯಾ=ಜ್ಞಾನರೂಪ. ಆದ್ದರಿಂದ ‘ವಾಯು’. ಎಲ್ಲವನ್ನು ನಿಯಮಿಸುವುದರಿಂದ ‘ಯಮ’. ಅಗ=ಚಲನೆ ಇಲ್ಲದ ವಿಶ್ವಕ್ಕೆ, ನಿ=ಚಲನೆ ನೀಡುವುದರಿಂದ ‘ಅಗ್ನಿ’. ಭಕ್ತರನ್ನು ವರಣ ಮಾಡುವುದರಿಂದ ವರುಣಃ. ಶಶ=ಮಿಗಿಲಾದ ಆನಂದದಿಂದ ಅಂಕ=ಅಂಕಿತನಾದ್ದರಿಂದ ‘ಶಶಾಂಕ’. ಪ್ರಜಾ=ಪ್ರಜೆಗಳ, ಪತಿ=ಪಾಲಕನಾದ್ದರಿಂದ ‘ಪ್ರಜಾಪತಿ’.] ನೀನೆ ಜಗದ ಮುತ್ತಜ್ಜ. ಸಾವಿರಬಾರಿ ನಿನಗೆ ನಮೋನಮೋ ಎಂದು ಮಣಿವೆ. ಮತ್ತೊಮ್ಮೆ ಮಗದೊಮ್ಮೆ ನಿನಗೆ ವಂದನೆ; ವಂದನೆ.
ನೀನು ವಾಯುಃ, ಯಮಃ, ವರುಣಃ, ಶಶಾಂಕಃ, ಪ್ರಜಾಪತಿಃ. ನೀನು ಜಗದ ಮುತ್ತಜ್ಜ. ನಿನಗೆ ಸಹಸ್ರ ಬಾರಿ ವಂದನೆ.
