ಶ್ಲೋಕ – 48
ನ ವೇದಯಜ್ಞಾಧ್ಯಯನೈರ್ನ ದಾನೈಃ ನಚ ಕ್ರಿಯಾಭಿರ್ನ ತಪೋಭಿರುಗ್ರೈಃ ।
ಏವಂರೂಪಃ ಶಕ್ಯ ಅಹಂ ನೃಲೋಕೇ ದ್ರಷ್ಟುಂ ತ್ವದನ್ಯೇನ ಕುರುಪ್ರವೀರ ॥೪೮॥
ನ ವೇದ ಯಜ್ಞ ಅಧ್ಯಯನೈಃ ನ ದಾನೈಃ ನ ಚ ಕ್ರಿಯಾಭಿಃ ನ ತಪೋಭಿಃ ಉಗ್ರೈಃ ।
ಏವಮ್ ರೂಪಃ ಶಕ್ಯಃ ಅಹಮ್ ನೃಲೋಕೇ ದ್ರಷ್ಟುಮ್ ತ್ವತ್ ಅನ್ಯೇನ ಕುರು ಪ್ರವೀರ – ಕುರುವಂಶದ ಕಡುಗಲಿಯೆ, ಭೂಲೋಕದಲ್ಲಿ ನೀನಲ್ಲದೆ ಇನ್ನಾರೂ ಇಂಥ ಬಗೆಯ ನನ್ನನ್ನು ಕಾಣುವುದು ಸಾಧ್ಯವಿಲ್ಲ. ಸಾಧ್ಯವಿಲ್ಲ ವೇದಗಳಲ್ಲಿ ಕರ್ಮಕಾಂಡವನ್ನರಸುವ ಕಲಿಕೆಗಳಿಂದ. ಇಲ್ಲ ಕೊಡುಗೆಗಳಿಂದ. ಇಲ್ಲ ನೇಮ ನೋಂಪಿಗಳಿಂದ. ಇಲ್ಲ ಕಟ್ಟುನಿಟ್ಟಿನ ತಪಗಳಿಂದ.
ಭಗವಂತನ ಪ್ರೀತಿಗೆ ಪಾತ್ರರಾಗದ ಯಾರೂ ಆತನ ವಿಶ್ವ ರೂಪ ದರ್ಶನ ಪಡೆಯಲು ಸಾಧ್ಯವಿಲ್ಲ. ವೇದಾಧ್ಯಾಯದಿಂದ, ಯಜ್ಞದಿಂದ, ದಾನದಿಂದ ಇತ್ಯಾದಿ ಕರ್ಮದಿಂದ ಸರ್ವೋತ್ತಮನಾದ, ಸರ್ವ ವಿಲಕ್ಷನನಾದ ಭಗವಂತನ ವಿಶ್ವರೂಪ ದರ್ಶನ ಪಡೆಯುವುದು ಸಾಧ್ಯವಿಲ್ಲ. “ಅಂಥಹ ನನ್ನ ರೂಪವನ್ನು ಕರ್ಮ ನಿಷ್ಠನಾದ(ಕುರುಪ್ರವೀರ) ನೀನು ಕಂಡೆ” ಎನ್ನುತ್ತಾನೆ ಕೃಷ್ಣ.
