ಶ್ಲೋಕ – 26 & 27
ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ ಸರ್ವೇ ಸಹೈವಾವನಿಪಾಲಸಂಘೈಃ ।
ಭೀಷ್ಮೋ ದ್ರೋಣಃ ಸೂತಪುತ್ರಸ್ತಥಾSಸೌ ಸಹಾಸ್ಮದೀಯೈರಪಿ ಯೋಧಮುಖ್ಯೈಃ ॥೨೬॥
ವಕ್ತ್ರಾಣಿ ತೇ ತ್ವರಮಾಣಾ ವಿಶಂತಿ ದಂಷ್ಟ್ರಾಕರಾಳಾನಿ ಭಯಾನಕಾನಿ ।
ಕೇಚಿದ್ ವಿಲಗ್ನಾ ದಶನಾಂತರೇಷು ಸಂದೃಶ್ಯಂತೇ ಚೂರ್ಣಿತೈರುತ್ತಮಾಂಗೈಃ ॥೨೭॥
ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ ಸರ್ವೇ ಸಹ ಏವ ಅವನಿಪಾಲ ಸಂಘೈಃ ।
ಭೀಷ್ಮಃ ದ್ರೋಣಃ ಸೂತಪುತ್ರಃ ತಥಾ ಅಸೌ ಸಹ ಅಸ್ಮದೀಯೈಃ ಅಪಿ ಯೋಧ ಮುಖ್ಯೈಃ ||
ವಕ್ತ್ರಾಣಿ ತೇ ತ್ವರಮಾಣಾಃ ವಿಶಂತಿ ದಂಷ್ಟ್ರಾಕರಾಳಾನಿ ಭಯಾನಕಾನಿ ।
ಕೇಚಿತ್ ವಿಲಗ್ನಾಃ ದಶನ ಅಂತರೇಷು ಸಂದೃಶ್ಯಂತೇ ಚೂರ್ಣಿತೈಃ ಉತ್ತಮಾಂಗೈಃ – ಭೀಷ್ಮ ದ್ರೋಣ ಮತ್ತು ಈ ಕರ್ಣ, ಜೊತೆಗೆ ನಮ್ಮ ಕಾದಾಳುಗಳ ಮುಖಂಡರು ಕೂಡ. ಕಾಣುತ್ತಿದ್ದೇನೆ ಕಟವಾಯಿಯೆಡೆಯಲ್ಲಿ ಸಿಕ್ಕು ನುಗ್ಗು ನುರಿಯಾದ ಕೆಲವರನ್ನು; ನುಜ್ಜುಗುಜ್ಜಾದ ಅವರ ತಲೆಬುರುಡೆಗಳನ್ನು.
ಅರ್ಜುನ ಭಗವಂತನಲ್ಲಿ ಭವಿಷತ್ಕಾಲದಲ್ಲಿ ನಡೆಯುವ ಘಟನೆಗಳನ್ನು ಕಾಣುತ್ತಿದ್ದಾನೆ. ಪ್ರಪಂಚದಲ್ಲಿ ಎಲ್ಲವೂ ಪೂರ್ವ ನಿರ್ಧಾರಿತ. ಇದನ್ನು ಅರ್ಜುನ ತನ್ನ ದಿವ್ಯ ದೃಷ್ಟಿಯಲ್ಲಿ ಕಾಣುತ್ತಿದ್ದಾನೆ ಅಷ್ಟೆ. ಭೀಷ್ಮ ದ್ರೋಣ ಮತ್ತು ಈ ಕರ್ಣ ಎಲ್ಲರೂ ಆ ನಿನ್ನ ಬಾಯಿಯೊಳಗೆ ಹೋಗುತ್ತಿದ್ದಾರೆ. ಜೊತೆಗೆ ನಮ್ಮ ಸೈನ್ಯದ ಮುಖಂಡರೂ ಕೂಡ. ಅಲ್ಲಿ ಕೆಲವರು ಭಯಂಕರವಾದ ಆ ನಿನ್ನ ಕೋರೆ ದಾಡೆಗಳಿಗೆ ಸಿಕ್ಕು ನುಜ್ಜುಗುಜ್ಜಾಗುತ್ತಿರುವುದನ್ನು ಕಾಣುತ್ತಿದ್ದೇನೆ.
