ಶ್ಲೋಕ – 11
ಸರ್ವದ್ವಾರೇಷು ದೇಹೇSಸ್ಮಿನ್ ಪ್ರಕಾಶ ಉಪಜಾಯತೇ ।
ಜ್ಞಾನಂ ಯದಾ ತದಾ ವಿದ್ಯಾದ್ ವಿವೃದ್ಧಂ ಸತ್ತ್ವಮಿತ್ಯುತ ॥೧೧॥
ಸರ್ವದ್ವಾರೇಷು ದೇಹೇ ಅಸ್ಮಿನ್ ಪ್ರಕಾಶಃ ಉಪಜಾಯತೇ ।
ಜ್ಞಾನಮ್ ಯದಾ ತದಾ ವಿದ್ಯಾತ್ ವಿವೃದ್ಧಮ್ ಸತ್ತ್ವಮ್ ಇತಿ ಉತ –ಈ ದೇಹದಲ್ಲಿ ಎಲ್ಲ ಇಂದ್ರಿಯಗಳಲ್ಲು ತಿಳಿವು ಬೆಳಕಾಗಿ ಮೂಡಿಬಂದಾಗ ಸತ್ವಗುಣ ಬಲಗೊಂಡಿದೆ ಎಂದು ತಿಳಿಯಬೇಕು.
ಸತ್ವಗುಣ ಜಾಗೃತವಾದಾಗ ನಮ್ಮೊಳಗೆ ಬೆಳಕು ತುಂಬಿದ ಅನುಭವವಾಗುತ್ತದೆ. ಈ ಬೆಳಕಿನ ಸಂಚಾರ ಎಲ್ಲಾ ಇಂದ್ರಿಯಗಳ ಮೂಲಕ ಹೊರಬರುತ್ತದೆ. ಸರ್ವೇಂದ್ರಿಯದಲ್ಲೂ ಜ್ಞಾನದ ಆನಂದ ತುಂಬುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಮನಸ್ಸಿನಲ್ಲಿ ಹೊಸಹೊಸ ಜ್ಞಾನದ ವಿಚಾರ (intututional flash) ಹೊಳೆಯಲಾರಂಭಿಸುತ್ತದೆ. ಇದರಿಂದ ಅಪಾರ ಸಂತೋಷವಾಗುತ್ತದೆ. ಇದು ಸತ್ವಗುಣದ ಜಾಗೃತಾವಸ್ಥೆ.
