ಶ್ಲೋಕ – 12
ಅಭಿಸಂಧಾಯ ತು ಫಲಂ ಡಂಭಾರ್ಥಮಪಿ ಚೈವ ಯತ್ ।
ಇಜ್ಯತೇ ಭರತಶ್ರೇಷ್ಠ ತಂ ಯಜ್ಞಂ ವಿದ್ಧಿ ರಾಜಸಮ್ ॥೧೨॥
ಅಭಿಸಂಧಾಯ ತು ಫಲಮ್ ಡಂಭ ಅರ್ಥಮ್ ಅಪಿ ಚ ಏವ ಯತ್ ।
ಇಜ್ಯತೇ ಭರತಶ್ರೇಷ್ಠ ತಮ್ ಯಜ್ಞಂ ವಿದ್ಧಿ ರಾಜಸಮ್ –ಓ ಭರತಶ್ರೇಷ್ಠ, ಫಲದ ಬಯಕೆಯಿಂದ ಅಥವಾ ಬೂಟಾಟಿಕೆಗಾಗಿ ಮಾಡುವ ಯಜ್ಞ ರಾಜಸವೆಂದು ತಿಳಿ.
ಸ್ವಾರ್ಥದಿಂದ ಒಂದು ವಿಶೇಷ ಫಲವನ್ನು ಬಯಸಿ, ಡಂಭಾಚಾರದಿಂದ ಮಾಡುವ ಯಜ್ಞ ರಾಜಸ ಯಜ್ಞ ಎನಿಸುತ್ತದೆ. ಯಾವುದೇ ಯಜ್ಞ ಭಗವಂತನನ್ನು ಸೇರಬೇಕಾದರೆ ಅದನ್ನು ನಾವು ಭಕ್ತಿಯಿಂದ ಮಾಡಬೇಕು. ಭಗವಂತನಲ್ಲಿ ರತರಾದವರಲ್ಲಿ ನಾವು ಶ್ರೇಷ್ಠರಾಗಿ(ಭರತಶ್ರೇಷ್ಠ) ಕ್ರಿಯೆ ಮಾಡಬೇಕು. ಇದಿಲ್ಲದೆ ಪ್ರಚಾರಕ್ಕಾಗಿ ಮಾಡುವ ಯಜ್ಞ ರಾಜಸ ಯಜ್ಞವಾಗುತ್ತದೆ.
