ಶ್ಲೋಕ – 19
ಮೂಢಗ್ರಾಹೇಣಾSತ್ಮನೋ ಯತ್ ಪೀಡಯಾ ಕ್ರಿಯತೇ ತಪಃ ।
ಪರಸ್ಯೋತ್ಸಾದನಾರ್ಥಂ ವಾ ತತ್ ತಾಮಸಮುದಾಹೃತಮ್ ॥೧೯॥
ಮೂಢ ಗ್ರಾಹೇಣ ಆತ್ಮನಃ ಯತ್ ಪೀಡಯಾ ಕ್ರಿಯತೇ ತಪಃ ।
ಪರಸ್ಯ ಉತ್ಸಾದನ ಅರ್ಥಂ ವಾ ತತ್ ತಾಮಸಮ್ ಉದಾಹೃತಮ್ –ದುರಾಗ್ರಹದಿಂದ ತನ್ನ ದೇಹವನ್ನೆ ದಂಡಿಸುವ ಮೂಲಕ, ಅಥವಾ ಆಗದವರನ್ನು ಮುಗಿಸುವುದಕ್ಕಾಗಿ ಮಾಡುವ ತಪಸ್ಸು ತಾಮಸ ತಪಸ್ಸು ಎನ್ನಿಸುತ್ತದೆ.
ತಪ್ಪು ತಿಳುವಳಿಕೆಯಿಂದ, ಭ್ರಮೆಯಿಂದ, ಪರಮಾತ್ಮನ ಅನುಸಂಧಾನವಿಲ್ಲದೆ, ಇನ್ನೊಬ್ಬರು ಹಾಳಾಗಬೇಕು ಎನ್ನುವ ಕೆಟ್ಟ ಭಾವನೆಯಿಂದ, ತನ್ನ ದೇಹದೊಳಗಿರುವ ಭಗವಂತನ ಎಚ್ಚರವಿಲ್ಲದೆ, ದೇಹ ದಂಡನೆ ಮಾಡಿಕೊಂಡು ಮಾಡುವ ತಪಸ್ಸು ತಾಮಸ ತಪಸ್ಸು.
