ಶ್ಲೋಕ – 21
ಯತ್ ತು ಪ್ರತ್ತ್ಯುಪಕಾರಾರ್ಥಂ ಫಲಮುದ್ದಿಶ್ಯ ವಾ ಪುನಃ ।
ದೀಯತೇ ಚ ಪರಿಕ್ಲಿಷ್ಟಂ ತದ್ ರಾಜಸಮುದಾಹೃತಮ್ ॥೨೧॥
ಯತ್ ತು ಪ್ರತ್ತ್ಯುಪಕಾರಾರ್ಥಂ ಫಲಮ್ ಉದ್ದಿಶ್ಯ ವಾ ಪುನಃ ।
ದೀಯತೇ ಚ ಪರಿಕ್ಲಿಷ್ಟಂ ತತ್ ರಾಜಸಮ್ ಉದಾಹೃತಮ್ –ಪ್ರತ್ಯುಪಕಾರಕ್ಕಾಗಿ ಅಥವಾ ಫಲದ ಆಸೆಯಿಂದ,
ಕೊಡಬೇಕಲ್ಲ ಎಂದು ಕೊಡುವ ದಾನ ರಾಜಸ ಎನಿಸುತ್ತದೆ.
ಇನ್ನೊಬ್ಬರು ನಮಗೆ ಮುಂದೆ ಉಪಕಾರ ಮಾಡಲಿ ಎಂದು ಅಥವಾ ಹಿಂದೆ ಮಾಡಿದ ಉಪಕಾರಕ್ಕೆ ಪ್ರತಿಯಾಗಿ,
ಕೊಡಬೇಕಲ್ಲಾ ಎಂದು ಕೊಡುವುದು. ಕೊಡುವಾಗ ಫಲದ ಬಯಕೆಯಿಂದ ಕೊಡುವುದು ರಾಜಸ ದಾನ.
