ಶ್ಲೋಕ – 11
ನಹಿ ದೇಹಭೃತಾ ಶಕ್ಯಂ ತ್ಯಕ್ತುಂ ಕರ್ಮಾಣ್ಯಶೇಷತಃ ।
ಯಸ್ತು ಕರ್ಮಫಲತ್ಯಾಗೀ ಸ ತ್ಯಾಗೀತ್ಯಭಿಧೀಯತೇ ॥೧೧॥
ನಹಿ ದೇಹಭೃತಾ ಶಕ್ಯಂ ತ್ಯಕ್ತುಂ ಕರ್ಮಾಣಿ ಅಶೇಷತಃ ।
ಯಃ ತು ಕರ್ಮ ಫಲ ತ್ಯಾಗೀ ಸಃ ತ್ಯಾಗೀ ಇತಿ ಅಭಿಧೀಯತೇ –ಶರೀರದಲ್ಲಿರುವಷ್ಟು ಕಾಲ ಕರ್ಮಗಳನ್ನು ಪೂರ್ತಿಯಾಗಿ ಬಿಡುವುದು ಸಾಧ್ಯವಿಲ್ಲ. ಕರ್ಮದ ಫಲವನ್ನು ತೊರೆದವನೆ ಕರ್ಮತ್ಯಾಗಿ.
ಮನುಷ್ಯನಾಗಿ ಹುಟ್ಟಿದ ಮೇಲೆ, ಹುಟ್ಟಿನಿಂದ ಸಾಯುವ ತನಕ ನಾವು ಕರ್ಮ ಮಾಡಲೇ ಬೇಕು. ಕರ್ಮವನ್ನೇ ಬಿಟ್ಟು ಬದುಕಲು ಸಾಧ್ಯವಿಲ್ಲ. ನಾವು ತೊರೆಯಬೇಕಾದದ್ದು ಕರ್ಮವನ್ನಲ್ಲ-ಕರ್ಮಫಲವನ್ನು. ಈ ರೀತಿ ಕರ್ಮ ಮಾಡಿಕೊಂಡು ಕರ್ಮಫಲ ತೊರೆದವನು ಕರ್ಮತ್ಯಾಗಿ ಎನಿಸುತ್ತಾನೆ.
